Friday, December 4 , 2020
ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು

ನವದೆಹಲಿ(19.11.2020): ಮೈದಾನದಲ್ಲಿ ಆಕ್ರಮಣಕಾರಿಯಾಗಿ ವರ್ತಿಸುವ ವಿರಾಟ್​ ಕೊಹ್ಲಿ ,ಮೈದಾನ ಹೊರಗೆ ಅದಕ್ಕೆ ವಿರುದ್ಧವಾಗಿರುತ್ತಾರೆ ಎನ್ನುವುದು ಮತ್ತೊಮ್ಮೆ ಸಾಭೀತಾಗಿದೆ.

ಈ ಹಿಂದೆ ಪ್ರವಾಹಕ್ಕೀಡಾದವರಿಗೆ, ಕೋವಿಡ್​ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ್ದ ಕಿಂಗ್​ ಕೊಹ್ಲಿ ಇದೀಗ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿಕೊಡುವ ಯೋಜನೆಗೆ ಮುಂದಾಗಿದ್ದಾರೆ.

ಅಪೌಷ್ಟಿಕತೆಯಿಂದ ಬಳಲುತ್ತಿರುವ 10 ಸಾವಿರ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಿದ್ದಾರೆ. ಸ್ಯಾನಿಟೇಷನ್(ವೈಜ್​)​ ಉತ್ಪನ್ನಗಳ ರಾಯಭಾರಿಯಾಗಿರುವ ವಿರಾಟ್ ಆ ಸಂಸ್ಥೆಯಿಂದ ಬರುವ ಲಾಭವನ್ನು ಬಡ ಮಕ್ಕಳ ಆಹಾರಕ್ಕೆ ನೀಡಲು ನಿರ್ಧರಿಸಿದ್ದಾರೆ.

“ವೈಜ್​ ಪ್ರಾಡೊಕ್ಟ್​ಗಳಿಂದ ನಾನು ಗಳಿಸುವ ಆದಾಯವನ್ನು ಭಾರತದಲ್ಲಿ ಅಪೌಷ್ಠಿಕತೆಯ ವಿರುದ್ಧ ಹೋರಾಡುವ ಗುರಿಯನ್ನು ಹೊಂದಿರುವ ಈ ಉಪಕ್ರಮದ ಭಾಗವಾಗಲು ನನಗೆ ಸಂತೋಷವಾಗಿದೆ” ಎಂದು ಕೊಹ್ಲಿ ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]