Sunday, September 19 , 2021
ಹೈಕಮಾಂಡ್ ಪರಿಗಣನೆಯಲ್ಲಿದೆಯಂತೆ 8 ಮಂದಿ ಹೆಸರು: ಯಾರಾಗ್ತಾರೆ ಮುಂದಿನ ಸಿಎಂ?

ಬೆಂಗಳೂರು (25.07.2021) :  ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸ್ಥಾನಕ್ಕೇರಲು ಹಲವರು ಮುಖಂಡರು ತೆರೆಮರೆಯಲ್ಲೇ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

2023 ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ನಾಯಕತ್ವ ಕೆಲವು ಹೆಸರುಗಳನ್ನು ಪಟ್ಟಿ ಮಾಡಿದೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದರಿಂದ ಮಾಹಿತಿ ತಿಳಿದುಬಂದಿದೆ. ಬಿಜೆಪಿ ವರಿಷ್ಠರು ಸಿಎಂ ಹುದ್ದೆಗೆ 8 ಜನರನ್ನು ಶಾರ್ಟ್‌ಲಿಸ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ಪರಂಪರೆ ಮುಂದುವರೆಸಲು ಲಿಂಗಾಯತರನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಧಾರವಾಡ ಪಶ್ಚಿಮ ಶಾಸಕ ಅರವಿಂದ್ ಬೆಲ್ಲದ್, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ, ಬಸವರಾಜ್ ಬೊಮ್ಮಾಯಿ ಅವರು ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಅವರಿಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]