Monday, July 26 , 2021
ದೇಶದ ಅತ್ಯಂತ ಕಿರಿಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಾರು ಬಲ್ಲಿರೇನು?

ರಾಷ್ಟ್ರಧ್ವನಿ ಪೊಲಿಟಿಕಲ್ ಡೆಸ್ಕ್: ನಮ್ಮ ದೇಶದಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಅನೇಕ ಪ್ರಕರಣಗಳನ್ನು ಕಂಡಿದ್ದೇವೆ; ಕಿರಿಯ ಮುಖ್ಯಮಂತ್ರಿ, ಕಿರಿಯ ಸಚಿವ, ಕಿರಿಯ ಮೇಯರ್ ಹಾಗೂ ಕಿರಿಯ ಗ್ರಾಮ ಪಂಚಾಯಿತಿ ಸದಸ್ಯೆ, ಹೀಗೆ. ಈಗ ಅತ್ಯಂತ ಕಿರಿಯ ವಯಸ್ಸಿನ ವ್ಯಕ್ತಿಯೊಬ್ಬರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

                ಹೌದು! ಉತ್ತರ ಪ್ರದೇಶದ ಬಲರಾಂಪುರದಲ್ಲಿ ಅತ್ಯಂತ ಕಿರಿಯ ವಯಸ್ಸಿನ ಅಂದರೆ,  21 ವರ್ಷದ ಯುವತಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.  21 ವರ್ಷದ ಆರತಿ ತಿಹಾರಿ ಚೌದರಿ ಡಿಹ್ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಲರಾಂಪುರದ  ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇವರಿಗೆ ಜಿಲ್ಲಾ ಮಾಜಿಸ್ಟ್ರೇಟ್ ಸ್ವಾತಿಯವರು ಪ್ರಮಾಣ ವಚನ ಬೋಧಿಸಿದ್ದಾರೆ.

               ದೇಶದ ಅತ್ಯಂತ ಕಿರಿಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆರತಿ ತಿಹಾರಿ 3ನೇ ವರ್ಷದ ಬಿಎ ಪದವಿ ಅಧ್ಯಯನ ಮಾಡುತ್ತಿದ್ದು, ಅತ್ಯಧಿಕ ಮತಗಳಿಂದ ವಿಜಯ ಸಾಧಿಸಿದ್ದಾರೆ. ಭಾರತೀಯ ಜನತಾ ಪಕ್ಷವು ಅತ್ಯಂತ ಕಿರಿಯ ಅಭ್ಯರ್ಥಿ ಆರತಿ ತಿವಾರಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆ ಮಾಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]